You are here
ಪ್ರೀತಿಗಾಗಿ ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರ

ಪ್ರೀತಿಗಾಗಿ ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರ

ಯಲ್ಲಾಪುರ: ಪ್ರೀತಿಸಿದ ಯುವತಿಯನ್ನು ಮದುವೆಯಾಗುವ ಸಲುವಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಯಲ್ಲಾಪುರ ಪಟ್ಟಣ ನೂತನ ನಗರದ ಹಸನ್ ರಹೀಮ್ ಖಾನ್ ಎಂಬಾತ ನಾಲ್ಕು ವರ್ಷಗಳಿಂದ ಯಶೋದಾಳನ್ನು ಪ್ರೀತಿಸುತ್ತಿದ್ದ. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.
ಮತಾಂತರ ಆದ ನಂತರ ರಾಹುಲ್ ಆರ್ಯ ಎಂದು ಹೆಸರು ಬದಲಾಯಿಸಿಕೊಂಡಿರುವ ಆತ, ಬುಧವಾರ ಇಲ್ಲಿನ ಈಶ್ವರ ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ಯಶೋದಾಳನ್ನು ಮದುವೆಯಾಗಿದ್ದಾನೆ. ಮದುವೆ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್, ಭಜರಂಗದಳದ ಮಂಗೇಶ್ ಕೈಸರೆ ಮತ್ತು ಯಶೋದಾಳ ಪೋಷಕರು ಹಾಜರಿದ್ದರು.

Related Articles