You are here
ಮೀಸಾ ನಿವಾಸದ ಮೇಲೆ ದಾಳಿ

ಮೀಸಾ ನಿವಾಸದ ಮೇಲೆ ದಾಳಿ

ನವದೆಹಲಿ: ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್, ಪತ್ನಿ, ಪುತ್ರನ ನಂತರ ಈಗ ಪುತ್ರಿ ಮೀಸಾ ಭಾರತಿ ಮನೆ ಮೇಲೆ ಜಾರಿ ನಿರ್ದೇಶನಾಲು ದಾಳಿ ನಡೆಸಿದೆ.
ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಶನಿವಾರ ದೆಹಲಿಯ ಸೈನಿಕ್ ಫಾರಂನಲ್ಲಿರುವ ಮೀಸಾ ಅವರ ನಿವಾಸದ ಮೇಲಷ್ಟೇ ಅಲ್ಲದೇ ಇತರ ಮೂರು ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತು.
ಅಕ್ರಮ ಹಣ ವರ್ಗಾವಣೆ ಮತ್ತು ಕಪ್ಪು ಹಣ ಸಂಗ್ರಹಕ್ಕೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಕಳೆದ ಸೋಮವಾರ ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಲಾಗಿತ್ತು.
ಲಾಲೂ ಪ್ರಸಾದ್ ಯಾದವ್ ಅವರಿಗೆ ಸಂಬಂಧಪಟ್ಟ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿದ ಒಂದು ದಿನದ ಬಳಿಕ ಜಾರಿ ನಿರ್ದೇಶನಾಲಯ ದೆಹಲಿಯಲ್ಲಿರುವ ಮೀಸಾ ಅವರ ಒಡೆತನದ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದೆ.

Related Articles