You are here
ವರ್ಗಾವಣೆ ಅರ್ಜಿ ಪರಿಶೀಲನೆ ಕಾರ್ಯ ಶೀಘ್ರ ಪೂರ್ಣ: ರಾಮಲಿಂಗಾರೆಡ್ಡಿ

ವರ್ಗಾವಣೆ ಅರ್ಜಿ ಪರಿಶೀಲನೆ ಕಾರ್ಯ ಶೀಘ್ರ ಪೂರ್ಣ: ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಅಂತರ ನಿಗಮ ವರ್ಗಾವಣೆಗೆ ಇಚ್ಛಾಪತ್ರ ಸಲ್ಲಿಸಲು ಕೊನೆಯ ದಿನಾಂಕ ಮುಗಿದಿದ್ದು, ಇದುವರೆಗೆ 17 ಸಾವಿರಕ್ಕೂ ಹೆಚ್ಚು ನೌಕರರು ಇಚ್ಛಾಪತ್ರವನ್ನು ಸಲ್ಲಿಸಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ವರ್ಗಾವಣೆ ಪಕ್ರಿಯೆಯನ್ನು ಮಾಸಾಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೂನ್‍ 24ರಿಂದ ವರ್ಗಾವಣೆ ಇಚ್ಛಾಪತ್ರವನ್ನು ಸಲ್ಲಿಸಲು ಅನುಮತಿ ನೀಡಲಾಗಿತ್ತು. ಈ ಪೈಕಿ ಶೇ. 50ಕ್ಕಿಂತ ಹೆಚ್ಚು ನೌಕರರು ಬಿಎಂಟಿಸಿಯವರೇ ಸಲ್ಲಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಸದ್ಯ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವರ್ಗಾವಣೆ ಸಿಗಲಿದೆ. ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಹುದ್ದೆಗಳು ಖಾಲಿಯಾಗುತ್ತಿದ್ದಂತೆ ಭರ್ತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.

ಕೆಎಸ್‍ಆರ್ ಟಿಸಿಯಿಂದ, ಈಶಾನ್ಯ , ವಾಯವ್ಯ ನಿಗಮದಿಂದಲೂ ನೌಕರರು ಇಚ್ಛಾಪತ್ರವನ್ನು ಸಲ್ಲಿಸಿದ್ದಾರೆ. ಈಗಾಗಲೇ ಶೇಕಡ 50ರಷ್ಟು ಅರ್ಜಿಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ಬಹುತೇಕ ಅರ್ಜಿಗಳನ್ನು ಪರಿಶೀಲಿಸಲಾಗುವುದು ಎಂದು ವರ್ಗಾವಣೆ ಸಮಿತಿ ಅಧ್ಯಕ್ಷರೂ ಆಗಿರುವ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್. ಉಮಾಶಂಕರ್‍ ತಿಳಿಸಿದ್ದಾರೆ.

Related Articles