You are here
ನಾಗರಿಕರಿಗೆ ಅಗತ್ಯ ಸೌಲಭ್ಯ ಒದಗಿಸಲು ಪಣ: ಶಾಸಕ ಮುನಿರತ್ನ ಭರವಸೆ

ನಾಗರಿಕರಿಗೆ ಅಗತ್ಯ ಸೌಲಭ್ಯ ಒದಗಿಸಲು ಪಣ: ಶಾಸಕ ಮುನಿರತ್ನ ಭರವಸೆ

ಬೆಂಗಳೂರು: ನಾಗರಿಕರಿಗೆ ಅಗತ್ಯವಿರುವ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸುಲು ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ದೊರೆಯುವ ಎಲ್ಲ ಅನುದಾನಗಳನ್ನು ಬಳಸಿಕೊಳ್ಳಲಾಗುವುದು ಎಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ತಿಳಿಸಿದ್ದಾರೆ.

This slideshow requires JavaScript.

ರಾಜರಾಜೇಶ್ವರಿ ನಗರ ವಾರ್ಡ್ 160ರಲ್ಲಿನ ಸಪ್ತಗಿರಿ ಲೇಔಟ್‍, ಚನ್ನಸಂದ್ರದ ಶಶಿಧರ್‍ ಬಡಾವಣೆಯಲ್ಲಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಮುನಿರತ್ನ, ಈಗಾಗಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಅಭಿವೃದ್ಧಿ ಯೋಜನೆ ಕಾಮಗಾರಿಗಳ ಪರಿಶೀಲನೆಯನ್ನೂ ನಡೆಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಾರ್ವಜನಿಕರು ಶಾಸಕರಿಗೆ ಅಹವಾಲು ಸಲ್ಲಿಸಿದರು. ಈ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿದ ಶಾಸಕ ಮುನಿರತ್ನ ಆದ್ಯತೆಯ ಮೇರೆಗೆ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ನಳಿನಿ ಮಂಜುನಾಥ್, ಮುಖಂಡ ಚಂದ್ರು, ಸ್ಥಳೀಯ ನಾಯಕರು, ಕಾರ್ಯಕರ್ಯರು, ನಿವಾಸಿಗಳು ಹಾಜರಿದ್ದರು.

Related Articles