You are here
ಜಾನುವಾರು: ಅಧಿಸೂಚನೆಗೆ ಸುಪ್ರೀಂ ತಡೆ

ಜಾನುವಾರು: ಅಧಿಸೂಚನೆಗೆ ಸುಪ್ರೀಂ ತಡೆ

ನವದೆಹಲಿ: ಹತ್ಯೆಯ ಉದ್ದೇಶಕ್ಕೆ ಜಾನವಾರು ಮಾರಾಟ ನಿಷೇಧಿಸಿ ಕೇಂದ್ರ ಸರಕಾರ ಹೊರಡಿಸಿದ್ದ ಅಧಿಸೂಚನೆಗೆ ಸುಪ್ರೀಂ ಕೋರ್ಟ್‌ ಮಂಗಳವಾರ ತಡೆಯಾಜ್ಞೆ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಖೆಹರ್‍ ಹಾಗೂ ಚಂದ್ರದೂಡ್ ಅವರಿದ್ದ ನ್ಯಾಯಪೀಠವು ಮುಂದಿನ ಮೂರು ತಿಂಗಳ ಕಾಲ ಈ ಅಧಿಸೂಚನೆ ಜಾರಿಯನ್ನು ತಡೆಹಿಡಿಯಿತು.
ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯ ಪೀಠವು ಇದರ ಜಾರಿಗೆ ಆತುರ ಬೇಡ. ಎಲ್ಲ ವರ್ಗದ ಅಭಿಪ್ರಾಯಗಳನ್ನು ಪರಿಶೀಲಿಸಿ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದೆ.
ಈ ಅಧಿಸೂಚನೆಗೆ ಸಂಬಂಧಪಟ್ಟ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಪರಿಗಣಿಸಲು ಮೂರು ತಿಂಗಳು ಕಾಲಾವಕಾಶಬೇಕಾಗುತ್ತಿದೆ. ಈ ವಿಷಯದಲ್ಲಿ ಬರುವ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಪರಿಗಣಿಸಿ ಅಧಿಸೂಚನೆಗೆ ತಿದ್ದುಪಡಿ ಮಾಡಲು ಆದೇಶ ನೀಡಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

Related Articles